ಜ.19-BMTC ನೌ.ಸ.ಸಂ.ಚುನಾವಣೆ: ಭ್ರಷ್ಟ, ಕಮಿಷನ್ ಮುಕ್ತ 20 ಭರವಸೆಗಳ ಪ್ರಣಾಳಿಕೆ ಬಿಡುಗಡೆ ಮಾಡಿದ ಸಾಮಾನ್ಯ ನೌಕರರ ತಂಡ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘದ ಚುನಾವಣೆ ಇದೇ ಜನವರಿ 19 ರಂದು ನಡೆಯಲಿದ್ದು, ಈಗಾಗಲೇ ಚುನಾವಣಾ ಕಾವು ಏರುತ್ತಿದೆ, ನೌಕರರ ಸಂಘಟನೆಗಳ ಮುಖಂಡರು ತಂಡ ರಚನೆ ಮಾಡಿಕೊಂಡು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಚುನಾವಣೆಯಲ್ಲಿ ಒಂದು ತಂಡದಿಂದ 13 ಅಭ್ಯರ್ಥಿಗಳು ಸ್ಪರ್ಧಿಸಬಹುದು. ಹೀಗಾಗಿ ಒಬ್ಬ ಅಭ್ಯರ್ಥಿಯೂ 3 ರಿಂದ 4 ಲಕ್ಷ ರೂ.ಗಳವರೆಗೆ ತನ್ನ ತಂಡದ ಮುಂದಾಳತ್ವ ವಹಿಸಿರುವವರಿಗೆ ಕೊಡಬೇಕು. ಇನ್ನು ಇಷ್ಟೇ ಅಲ್ಲ ತಂಡದ ಮುಂದಾಳತ್ವ ವಹಿಸಿರುವವರ…

















