9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಪ್ರೇಮ್ ಸಿಂಗ್ ನಾಯ್ಕ್ಗೆ ಮೂರು ವರ್ಷ ಸಾದಾ ಸಜೆ ಮತ್ತು 50 ಸಾವಿರ ರೂ. ದಂಡ…














