ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ
ಗದಗ: ವಿಶ್ವದೆಲ್ಲೆಡೆ ಕರ್ನಾಟಕ ಹೆಸರಾಗಿದೆ, ಜತೆಗೆ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು, ಕನ್ನಡವನ್ನು ಪ್ರೀತಿಸಬೇಕು. ಯಾಕೆಂದರೆ ಕನ್ನಡ ನಮ್ಮ ನಾಡಿ ಮಿಡಿತ, ಹೃದಯದ ಬಡಿತ, ಮಾತೃ ಪ್ರೇಮದ ತುಡಿತ, ಹಾಗೂ ಬದುಕಿನ ದುಡಿತ, ಕನ್ನಡ ಪ್ರೀತಿಯೇ ಕನ್ನಡಿಗರಿಗೆ ಶಾಶ್ವತ ಎಂದು ಹಿರಿಯ ಸಾಹಿತಿ ಅಂದಾನೆಪ್ಪ ವಿಭೂತಿ ತಿಳಿಸಿದ್ದಾರೆ. ಅವರು ಶನಿವಾರ ಬೆಳಗ್ಗೆ ಚಿಕ್ಕಟ್ಟಿ ಶಾಲೆಯ ಸಭಾಭವನದಲ್ಲಿ, ಉತ್ತರ ಕರ್ನಾಟಕ ಕಲಾವಿದರ ಹಾಗೂ ಕಲಾ ಪೋಷಕರ ಸಂಘಟನೆಯಾದ ಕಲಾ ವಿಕಾಸ ಪರಿಷತ್ ಗದಗ ಮತ್ತು…














