ಸಂಗೀತ ನಿರ್ದೇಶಕ ಗುರುಕಿರಣ್, ಸಮಾಜ ಸೇವಕ ಕೆ.ಎಸ್.ರಾಜಣ್ಣಗೆ ಬೆಂವಿವಿ ಡಾಕ್ಟರೇಟ್ ಪದವಿ ಪ್ರದಾನ
ಬೆಂಗಳೂರು: 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಮತ್ತು ಸಮಾಜ ಸೇವಕ ಕೆ.ಎಸ್.ರಾಜಣ್ಣ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು (Bengaluru University) ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 59ನೇ ವಾರ್ಷಿಕ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, 26,210 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. 21,853 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಂಡಿದ್ದು, 5,861…














